ಹುಬ್ಬಳ್ಳಿ: ಖ್ಯಾತ ವಾಸ್ತುಶಾಸ್ತ್ರಜ್ಞ ಚಂದ್ರಶೇಖರ ಗುರೂಜಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರೂ ಹಂತಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಹಾಂತೇಶ ಶಿರೋಳ ಹಾಗೂ ಮಂಜುನಾಥ ಮೆರವಾಡೆ ಎಂಬುವಂತ ಇಬ್ಬರು ಹಂತಕರನ್ನು ವಶಕ್ಕೆ ಪಡೆದಿದ್ದು, ನಿಗೂಢ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂಬುವಂತ ಮಾಹಿತಿ ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ಲಭ್ಯವಾಗಿದೆ. ಪೋಲಿಸ್ ಇಲಾಖೆಯ ಅಧಿಕೃತವಾಗಿ ಘೋಷಣೆಯೊಂದೆ ಬಾಕಿ ಉಳಿದಿದೆ.
ಈಗಾಗಲೇ ಮಹಾಂತೇಶ ಅವರ ಪತ್ನಿ ವನಜಾಕ್ಷಿಯವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಪೊಲೀಸರು ಈಗ ಇಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/07/2022 04:38 pm