ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್‌ನಿಂದ ವನಜಾಕ್ಷಿಯ ತೀವ್ರ ವಿಚಾರಣೆ ನಡೆಸಲಾಗಿದೆ. ವನಜಾಕ್ಷಿ ಶಿರೂರ ಹಂತಕ ಮಹಾಂತೇಶ ಶಿರೂರ ಪತ್ನಿಯಾಗಿರುವ ಹಿನ್ನೆಲೆಯಲ್ಲಿ ತೀವ್ರ ವಿಚಾರಣೆ ನಡೆಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲ ಬ್ಯಾಕೋಡ ನೇತೃತ್ವದಲ್ಲಿ ಸತತವಾಗಿ ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿ ಮನೆಗೆ ವಾಪಸ್ ಕಳುಹಿಸಿದ್ದಾರೆ.
ಇನ್ನು ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/07/2022 07:29 pm