ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಯುವತಿ ಕೊಲೆ: ಮೂರು ದಿನಗಳ ನಂತರ ಪತ್ತೆಯಾಯ್ತು ಶವ

ಧಾರವಾಡ: ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ರಸ್ತೆ ಪಕ್ಕ ಬಿಸಾಕಿ ಹೋಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಶೋಭಾ ಮಾದರ ಎಂಬ ಮಹಿಳೆಯೇ ಹತ್ಯೆಗೀಡಾದವಳು. ಮೂರು ದಿನಗಳ ಹಿಂದೆ ಈ ಮಹಿಳೆಯನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಧಾರವಾಡ ಹೊರವಲಯದ ಸವದತ್ತಿ ರಸ್ತೆಯಲ್ಲಿ ಪತ್ತೆಯಾಗಿದೆ.

ಶೋಭಾ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಳು. ಈಕೆಯನ್ನು ಹತ್ಯೆ ಮಾಡಿದ ನಂತರ ದುಷ್ಕರ್ಮಿಗಳು ರಸ್ತೆ ಪಕ್ಕ ಬಿಸಾಕಿ ಹೋಗಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹತ್ಯೆ ಮಾಡಿದವರು ಯಾರು ಹಾಗೂ ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ ಎಂಬುದು ಇನ್ನಷ್ಟೆ ಪತ್ತೆಯಾಗಬೇಕಿದೆ.

Edited By : Nagaraj Tulugeri
Kshetra Samachara

Kshetra Samachara

06/07/2022 06:54 pm

Cinque Terre

113.08 K

Cinque Terre

25

ಸಂಬಂಧಿತ ಸುದ್ದಿ