ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗ್ರಾಪಂ ಸದಸ್ಯನ ಕೊಚ್ಚಿ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ

ಹುಬ್ಬಳ್ಳಿ: ಕೌಟುಂಬಿಕ ಹಳೆಯ ದ್ವೇಷದ ಹಿನ್ನೆಲೆಯಲ್ಲಿ, ರಾಯನಾಳ ಗ್ರಾಪಂ ಸದಸ್ಯನನ್ನು ಕೊಲೆ ಮಾಡಿದ್ದ ಘಟನೆಗೆ ಸಂಬಂಧಿಸಿ, ಹಳೇಹುಬ್ಬಳ್ಳಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ‌.

ರಾಯನಾಳ ಗ್ರಾಪಂ ಸದಸ್ಯ ಗಂಗಿವಾಳ ಗ್ರಾಮದ ದೀಪಕ ಶಿವಾಜಿ ಪಟದಾರಿ ( 30 ) ಅವರನ್ನು, ಸೋಮವಾರ ರಾತ್ರಿ ರಾಯನಾಳದಲ್ಲಿ 6 ರಿಂದ 8 ಜನರ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕುರಿತು ಹತ್ಯೆಯಾದ ದೀಪಕನ ಸಹೋದರ ಹಳೇಹುಬ್ಬಳ್ಳಿ ಠಾಣೆಯಲ್ಲಿ ಕುಟುಂಬದ ಸದಸ್ಯರು ಸೇರಿದಂತೆ ಕೆಲವರ ಮೇಲೆ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆದಿದ್ದು , ಇನ್ನು ಕೆಲವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Edited By : Nirmala Aralikatti
Kshetra Samachara

Kshetra Samachara

07/07/2022 12:05 pm

Cinque Terre

29.35 K

Cinque Terre

0

ಸಂಬಂಧಿತ ಸುದ್ದಿ