ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಗಿವಾಳ ಗ್ರಾಪಂ ಸದಸ್ಯ ಕೊಲೆ ಕೇಸ್ : 6 ಜನ ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ಗಂಗಿವಾಳ ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಪಟದಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಪೊಲೀಸರು ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜುಲೈ 4 ರಂದು ರಾಯನಾಳದಲ್ಲಿ ಗಂಗಿವಾಳ ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಪಟದಾರಿ (31) ಮೇಲೆ ಆರು ಮಂದಿ ಚೂರಿಯಿಂದ ಇರಿದು ಕೊಂದಿದ್ದರು. ಅದೇ ದಿನ ರಾತ್ರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದೀಪಕ್ ಮೃತಪಟ್ಟಿದ್ದರು. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ಪ್ರವೀಣ್ ಮುದ್ಲಿಂಗನವರ್, ಯಲ್ಲಪ್ಪ ಮೇಟಿ, ರುದ್ರಪ್ಪ ಮೇಟಿ, ಮಲ್ಲಿಕಾರ್ಜುನ ಮೇಟಿ, ಶಿವು ಮೇಟಿ, ನಾಗರಾಜ್ ಹೆಗ್ಗಣ್ಣನವರ್ ಬಂಧಿತರು.

ಮೃತ ದೀಪಕ್ ಪಟದಾರಿ ಎರಡು ವರ್ಷಗಳ ಹಿಂದೆ ಬೇರೊಂದು ಸಮುದಾಯದ ಮೇಟಿ ಕುಟುಂಬದ ಹುಡುಗಿಯನ್ನು ಮದುವೆಯಾಗಿದ್ದು ಆತನೊಂದಿಗೆ ಆರೋಪಿಗಳ ದ್ವೇಷಕ್ಕೆ ಕಾರಣವಾಗಿತ್ತು. ಮೇಟಿ ಕುಟುಂಬ ಕೂಡ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ಇತ್ತೀಚೆಗಷ್ಟೇ ದೀಪಕ್ ಅವರು ಗಂಗಿವಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಪ್ರೇಮ ವಿವಾಹ ಹಾಗೂ ರಾಜಕೀಯ ವೈಷಮ್ಯವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ ಬಯಲಾಗಿದೆ.

Edited By : Nirmala Aralikatti
Kshetra Samachara

Kshetra Samachara

08/07/2022 01:00 pm

Cinque Terre

26.24 K

Cinque Terre

3

ಸಂಬಂಧಿತ ಸುದ್ದಿ