ಧಾರವಾಡ: ಧಾರವಾಡದಲ್ಲಿ ಹಾಡಹಗಲೇ ಮತ್ತೊಂದು ಕೊಲೆಗೆ ಯತ್ನ ನಡೆದಿದೆ.ರಾಮ್ ಸೇನಾ ಜಿಲ್ಲಾಧ್ಯಕ್ಷ ವಿಜಯ ಕದಂ ಎಂಬಾತನೇ ತನ್ನ ಪ್ರೇಯಸಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ.
ಪದ್ಮಾ ಎಂಬಾಕೆಯೇ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡವಳು. ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ನಂತರ ಆರೋಪಿ ವಿಜಯ ಕದಂ ಧಾರವಾಡ ಉಪನಗರ ಠಾಣೆಗೆ ಬಂದು ಹಾಜರಾಗಿದ್ದಾನೆ.
ಇವರಿಬ್ಬರ ಮಧ್ಯೆ ಕಳೆದ ಏಳು ವರ್ಷಗಳಿಂದ ಅಕ್ರಮ ಸಂಬಂಧವಿತ್ತು. ಆಗಾಗ ಇಬ್ಬರ ಮಧ್ಯೆ ಜಗಳ ಕೂಡ ನಡೆಯುತ್ತಿತ್ತು. ಇವತ್ತು ಕೂಡ ಇಬ್ಬರ ಮಧ್ಯೆ ಜಗಳ ನಡೆದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದರಿಂದ ವಿಜಯ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ಘಟನೆ ಧಾರವಾಡದ ಸೋನಾಪುರದಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡಿರುವ ಪದ್ಮಾ ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ, ಸದ್ಯ ಆಕೆಯನ್ನು ಚಿಕಿತ್ಸೆಗಾಗಿ ಕಿಮ್ಸ್ಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
Kshetra Samachara
13/07/2022 04:13 pm