ಹುಬ್ಬಳ್ಳಿ: ದೈಹಿಕ ಸಂಬಂಧ ಹೊಂದಲು ಯುವಕ ಪೀಡಿಸಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಗೋಕುಲ ಠಾಣೆ ವ್ಯಾಪ್ತಿಯಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಗೋವಿಂದಪ್ಪ ಪೂಜಾರ ಎಂಬಾತ ಇತರರೊಂದಿಗೆ ದೈಹಿಕ ಸಂಪರ್ಕ ಬೆಳೆಸುವಂತೆ ಯುವತಿಗೆ ಪ್ರಚೋದನೆ ನೀಡಿದ್ದ. ಹಾಗೂ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ಆರೋಪಿ ಗೋವಿಂದಪ್ಪ ಪೂಜಾರಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.
Kshetra Samachara
14/07/2022 08:46 am