ಕಲಘಟಗಿ: ಕಲಘಟಗಿ ತಾಲೂಕಿನ ನೀರಸಾಗರದ ಜಲಾಶಯದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕ ನೀರುಪಾಲಾಗಿರುವ ಘಟನೆ ನಿನ್ನೆ (ಭಾನುವಾರ) ನಡೆದಿದೆ.
ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ನಿವಾಸಿ ಕಿರಣ ರಜಪೂತ (22) ನೀರು ಪಾಲಾದ ಯುವಕ. ಇಂದು ಗೆಳೆಯರ ಜೊತೆಗೆ ಪ್ರವಾಸಕ್ಕೆಂದು ಹೋಗಿದ್ದಾಗ ಈ ವೇಳೆ ಸೆಲ್ಫಿಗಾಗಿ ಜಲಾಶಯದ ದಡದಲ್ಲಿ ನಿಂತಿದ್ದನು. ಏಕಾಏಕಿ ನೀರಿನ ರಭಸಕ್ಕೆ ಯುವಕ ಕೊಚ್ಚಿ ಹೋಗಿದ್ದಾನೆ.
ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ನೀರಿನಲ್ಲಿ ಕೊಚ್ಚಿ ಹೋದ ಕಿರಣ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ದುರ್ಘಟನೆಯು ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/07/2022 07:39 am