ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಡೆತ್‌ ನೋಟ್ ಬರೆದಿಟ್ಟು ಕೆಇಬಿ ನೌಕರರ ಆತ್ಮಹತ್ಯೆ

ಧಾರವಾಡ: ಡೆತ್ ನೋಟ್ ಬರೆದಿಟ್ಟು ಕೆಇಬಿ ನೌಕರನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಉದಯಗಿರಿಯಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ 110ಕೆಬಿ ಮಾರ್ಗದ ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಶ ಸೊಂಟನವರ (24) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಾಂತೇಶ, ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ, ದೂರು ದಾಖಲಿಸಿಕೊಂಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

21/07/2022 02:18 pm

Cinque Terre

38.41 K

Cinque Terre

1

ಸಂಬಂಧಿತ ಸುದ್ದಿ