ಧಾರವಾಡ: ಮದುವೆಯಾದ ನಾಲ್ಕೇ ತಿಂಗಳಲ್ಲಿ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ನವಲೂರು ಗ್ರಾಮದಲ್ಲಿ ನಡೆದಿದೆ.
ಮಂಜುಳಾ ಕೈಲಾಸ ಲೋಕೂರು ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡವಳು.
ಕಳೆದ ನಾಲ್ಕು ತಿಂಗಳ ಹಿಂದೆ ಮಂಜುಳಾ ವಿವಾಹವಾಗಿತ್ತು. ಆಷಾಡಕ್ಕೆಂದು ತವರು ಮನೆಗೆ ಬಂದಿದ್ದ ಮಂಜುಳಾ, ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಮದುವೆಯಾದ ಒಂದು ವರ್ಷದ ಅವಧಿಯಲ್ಲಿ ಅಸಹಜ ಸಾವು ಸಂಭವಿಸಿದರೆ, ನಿಯಮಾನುಸಾರ ತಹಶೀಲ್ದಾರರು ಸ್ಥಳಕ್ಕೆ ಭೇಟಿ ಕೊಟ್ಟು ವಿಚಾರಣೆ ನಡೆಸಬೇಕಾಗುತ್ತದೆ. ಹೀಗಾಗಿ ತಹಶೀಲ್ದಾರ ಸಂತೋಷ ಹಿರೇಮಠ ಅವರು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಸಂಬಂಧ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
22/07/2022 09:48 pm