ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರೈಲ್ವೇ ನಿಲ್ದಾಣದಲ್ಲಿ ಮಲಗಿದ ಸ್ಥಿತಿಯಲ್ಲೇ ವೃದ್ಧ ಸಾವು

ಹುಬ್ಬಳ್ಳಿ: ರೈಲ್ವೇ ನಿಲ್ದಾಣದಲ್ಲಿ ವೃದ್ಧರೊಬ್ಬರು ಮಲಗಿದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ಸುಮಾರು 70ರಿಂದ 75 ವರ್ಷದ ವೃದ್ಧರೊಬ್ಬರು ರೈಲ್ವೇ ನಿಲ್ದಾಣದ ಪ್ಲಾಟ್ ಫಾರ್ಮ್ 4ರಲ್ಲಿ ಮಲಗಿದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶವವನ್ನು ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನಿಸಿ ಮೃತಪಟ್ಟ ವ್ಯಕ್ತಿಯ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

28/07/2022 06:04 pm

Cinque Terre

20.81 K

Cinque Terre

0

ಸಂಬಂಧಿತ ಸುದ್ದಿ