ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳಲ್ಲಿ ಇತ್ತೀಚೆಗೆ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದೆ. ಈ ಬೈಕ್ ಕದಿಯುವ ಖದೀಮರ ಗ್ಯಾಂಗ್ ಇದೀಗ ಗ್ರಾಮಾಂತರ ಭಾಗಕ್ಕೂ ಕಾಲಿಟ್ಟಿದೆ.
ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್ 220ಸಿಸಿ ಬೈಕ್‌ನ್ನು ಖದೀಮರು ಎಗರಿಸಿ ಪರಾರಿಯಾಗಿದ್ದಾರೆ. ಬೈಕ್ ಕಳ್ಳರು ಬೈಕ್‌ನ್ನು ಕದ್ದುಕೊಂಡು ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದ ಇಬ್ಬರು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ.
ಗ್ರಾಮಾಂತರ ಭಾಗದಲ್ಲಿ ಇದೇ ರೀತಿ ಒಂದೇ ವಾರದಲ್ಲಿ ಐದು ಬೈಕ್‌ಗಳು ಕಳ್ಳತನವಾದ ಬಗ್ಗೆ ವರದಿಯಾಗಿದೆ. ಮುಮ್ಮಿಗಟ್ಟಿ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
29/07/2022 11:55 am