ಹುಬ್ಬಳ್ಳಿ: ಕುರಿಗಳ ಕಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ಖದೀಮನನ್ನು ಅಟ್ಟಾಡಿಸಿ ಹಿಡಿದ ಪೊಲೀಸರು ನಂತರ ಅವನ ಕೈಕಾಲು ಕಟ್ಟಿ ಠಾಣೆಗೆ ಕರೆದೊಯ್ದಿದ್ದಾರೆ. ಈ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.
ಈ ಖದೀಮ ಧಾರವಾಡದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಕುರಿಗಳನ್ನು ಕಳ್ಳತನ ಮಾಡಿ ಮಾಡುತ್ತಿದ್ದನಂತೆ. ಅದೆಷ್ಟೋ ಬಾರಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದನಂತೆ. ಸಿಸಿ ಟಿವಿಯಲ್ಲಿ ಇವನ ಓಡಾಟ ತಿಳಿದುಕೊಂಡು ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಇರುವುದನ್ನು ಖಚಿತ ಪಡಿಸಿಕೊಂಡ ಧಾರವಾಡ ಪೊಲೀಸರು, ಹುಬ್ಬಳ್ಳಿ ಪೊಲೀಸರ ಸಹಾಯದಿಂದ ಅವನನ್ನು ಅಟ್ಟಾಡಿಸಿ ಹಿಡಿದು ಕೈಕಾಲು ಕಟ್ಟಿ ಠಾಣೆಗೆ ಕರೆದೊಯ್ದಿದ್ದಾರೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ
Kshetra Samachara
01/08/2022 12:21 pm