ಹುಬ್ಬಳ್ಳಿ:ನಗರದ ಗೋಡೌನ್ ನಲ್ಲಿ ನಿಷೇಧಿತ ಪ್ಲಾಸ್ಟಿಕ್ ಶೇಖರಣೆ ಮಾಡುತ್ತಿದ್ದಾಗ ಪಾಲಿಕೆ ಅಧಿಕಾರಿಗಳು ದಾಳಿ ಮಾಡಿ ಲಕ್ಷಾಂತರ ಮೌಲ್ಯದ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದ ಘಟನೆ ಸೋಮವಾರ ಹುಬ್ಬಳ್ಳಿಯಲ್ಲಿ ನಡೆದಿದೆ.
ಕಾರವಾರ ರಸ್ತೆಯ ದಾಲ್ ಮಿಲ್ ಹತ್ತಿರ ಇರುವ ಗೋಡೌನ್ ನಲ್ಲಿ ಅಕ್ರಮವಾಗಿ ಲಾರಿಯಲ್ಲಿ ಬೇರೆ ಕಡೆಯಿಂದ ತಂದಿದ್ದ ನಿಷೇಧಿತ ಪ್ಲಾಸ್ಟಿಕ್ ಶೇಖರಣೆ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ, ಪಾಲಿಕೆಯ ಅಧಿಕಾರಿಗಳು ದಾಳಿಯನ್ನು ಮಾಡಿ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದಾರೆ.
ಗೋಡೌನ್ ಮಾಲೀಕ ಹಾಗೂ ನಿಷೇಧಿತ ಪ್ಲಾಸ್ಟಿಕ್ ತಂದ ಲಾರಿಯ ಮೇಲೆ ಪಾಲಿಕೆ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Kshetra Samachara
01/08/2022 02:32 pm