ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾಂಜಾ ಮಾರಾಟ ಯತ್ನ : ವಿದ್ಯಾರ್ಥಿ ಜೈಲು ಪಾಲು

ಹುಬ್ಬಳ್ಳಿ : ಗೋಕುಲ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ದಾವಲಸಾಬ ಎಂಬ ಆರೋಪಿಯನ್ನು ಬಂಧನ ಮಾಡುವಲ್ಲಿ ಗೋಕುಲ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಗೋಕುಲ್ ರಸ್ತೆಯ ಕೈಗಾರಿಕಾ ವಲಯದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ ಇನ್ಸ್ ಪೆಕ್ಟರ್ ಖಾಲಿಮಿರ್ಚಿ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯಿಂದ 27 ಗ್ರಾಂ ಗಾಂಜಾ 660 ರೂಪಾಯಿ ನಗದು ವಶ ಪಡಿಸಿಕೊಂಡಿದ್ದಾರೆ.

ಗೋಕುಲ್ ಪೊಲೀಸ್ ಠಾಣೆಯಲ್ಲಿ ಆರೋಪಿಯ ಮೇಲೆ NDPS ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

08/08/2022 03:00 pm

Cinque Terre

21.36 K

Cinque Terre

0

ಸಂಬಂಧಿತ ಸುದ್ದಿ