ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮೀಟರ್ ಬಡ್ಡಿ ಕುಳಗಳ ಅಟ್ಟಹಾಸಕ್ಕೆ ಇಲ್ಲ ಬ್ರೇಕ್: ದೂರು ದಾಖಲಾಗಿದ್ದರೂ ಸಿಕ್ಕಿಲ್ಲ ಕಿಂಗ್ ಪಿನ್ಸ್..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಕ್ರೈಂ ಪ್ರಕರಣಗಳು ಹೆಚ್ಚುತ್ತಲೇ ಇದೆ. ಕೊಲೆ, ಚಾಕು ಇರಿತ ಪ್ರಕರಣ ಮಾಸುವ ಮುನ್ನವೇ ಮೀಟರ್ ಬಡ್ಡಿ ಹಾವಳಿಯ ಪ್ರಕರಣ ಬೆಳಕಿಗೆ ಬರುತ್ತಿವೆ. ಆದರೆ ಸೂಕ್ತ ಕಾರ್ಯಚರಣೆ ಹಾಗೂ ಸೂಕ್ತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಪ್ರಕರಣಗಳು ದಾಖಲೆಗಳು ಧೂಳು ಹಿಡಿಯುತ್ತಿವೆ.

ಹೌದು. ಮೀಟರ್ ಬಡ್ಡಿ ಹಾವಳಿ ತಪ್ಪಿಸಲು ಅದೆಷ್ಟೋ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಕಮೀಷನರೇಟ್ ಅದೆಷ್ಟೋ ನಿರ್ಧಾರ ಕೈಗೊಂಡರೂ ಕೂಡ ಕಡಿವಾಣ ಹಾಕಲು ಮಾತ್ರ ಸಾಧ್ಯವಾಗುತ್ತಿಲ್ಲ. ನಗರದಲ್ಲಿ ಮತ್ತೇ ಮೀಟರ್‌ ಬಡ್ಡಿ ಕುಳಗಳು ಬಾಲ ಬಿಚ್ಚಲಾರಂಭಿಸಿವೆ. ಇತ್ತೀಚೆಗಷ್ಟೇ ನಾಲ್ವರ ತಂಡ ಕೇಶ್ವಾಪುರ ವ್ಯಾಪ್ತಿಯ ಮಹಿಳೆಯೊಬ್ಬರ ಮನೆಗೆ ನುಗ್ಗಿ ಹಲ್ಲೆ ಮಾಡಿ ಎಳೆದಾಡಿದ್ದಲ್ಲದೇ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ರೇಣು ಕಿರಣ ಮಾಗಡಿ(48) ಎಂಬ ಮಹಿಳೆಯ ಮೇಲೆಯೇ ಏಕಾಏಕಿ ಒಳನುಗ್ಗಿ ಮನೆಯಿಂದ ಹೊರ ಹೋಗುವಂತೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ಬೈದಾಡಿ ಎಳೆದಾಡಿದ್ದು ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಪ್ರಕರಣ ದಾಖಲಾಗಿ ಸುಮಾರು ದಿನಗಳೇ ಕಳೆದರೂ ಕೂಡ ಇದುವರೆಗೂ ಆರೋಪಿಗಳನ್ನು ಬಂಧಿಸಲು ಮಾತ್ರ ಸಾಧ್ಯವಾಗಿಲ್ಲ. ಈ ಪ್ರಕರಣದ ಪ್ರಮುಖ ಆರೋಪಿಗಳು ಗೋವಾಕ್ಕೆ ಎಸ್ಕೇಪ್ ಆಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಹೀಗಿದ್ದರೂ ಕೂಡ ಪೊಲೀಸರು ಮೌನ ವಹಿಸಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಇನ್ನೂ ನಗರದ ಕುಖ್ಯಾತ ಬಡ್ಡಿಕುಳ ವಿದ್ಯಾನಗರ ನಿವಾಸಿ ರಾಜೇಶ ಮೆಹರವಾಡೆ, ಮೋಹಿತ ಮೆಹರವಾಡೆ, ಅನಿಲ ಮೆಹರವಾಡೆ, ನಾರಾಯಣ ಮೆಹರವಾಡೆ ಎಂಬುವವರೇ ಹಲ್ಲೆ ನಡೆಸಿದವರಾಗಿದ್ದಾರೆ. ರೇಣು ಮಾಗಡಿ(48) ತಮ್ಮ ಮಕ್ಕಳೊಂದಿಗೆ ಮನೋಜ್ ಪಾರ್ಕನಲ್ಲಿನ ಮನೆಯಲ್ಲಿ (ನಂ.116) ವಾಸಿಸುತ್ತಿದ್ದು ಇವರ ಪತಿ ಕಿರಣ್ ಮಾಗಡಿ ಒಂದು ವರ್ಷದ ಹಿಂದೆ ಮೃತರಾಗಿದ್ದಾರೆ. ಈಗಾಗಲೇ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರು ಮಾತ್ರ ಯಾವುದೇ ಕಾಳಜಿ ವಹಿಸದೇ ಇರುವುದು ನಿಜಕ್ಕೂ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಒಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ಮೀಟರ್ ಬಡ್ಡಿ ಕುಳಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲವೇ ಎಂಬುವಂತ ಅನುಮಾನ ವ್ಯಕ್ತವಾಗಿದ್ದು, ಚಿಕ್ಕಪುಟ್ಟ ಕ್ರೈಂ ಪ್ರಕರಣಗಳ ಗತಿಯೇ ಹೀಗಾದರೇ ದೊಡ್ಡ ಪ್ರಕರಣದ ಗತಿ ಏನು? ಎಂಬುವುದು ಸಾರ್ವಜನಿಕರ ಮಾತಾಗಿದೆ.

Edited By : Nagesh Gaonkar
Kshetra Samachara

Kshetra Samachara

08/08/2022 06:57 pm

Cinque Terre

22.22 K

Cinque Terre

4

ಸಂಬಂಧಿತ ಸುದ್ದಿ