ಹುಬ್ಬಳ್ಳಿ: ತನ್ನದೇ ಅಂಗಡಿಯಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಅಶೋಕ ನಗರದಲ್ಲಿ ನಿನ್ನೆ (ಸೋಮವಾರ) ರಾತ್ರಿ ನಡೆದಿದೆ.
ಆದರ್ಶ ನಗರದ ಶ್ರೀಪಾದ ಕುಲಕರ್ಣಿ (34) ಎಂಬವರು ಅಶೋಕ ನಗರದಲ್ಲಿ ಟಿಕೆಟ್ ಬುಕಿಂಗ್ ಹಾಗೂ ರೊಟ್ಟಿ ಅಂಗಡಿಯನ್ನು ನಡೆಸುತ್ತಿದ್ದರು. ಆದ್ರೆ ನಿನ್ನೆ ತಡರಾತ್ರಿ ಅದೇ ಅಂಗಡಿಯಲ್ಲಿ ಶ್ರೀಪಾದ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಕೂಡಲೇ ಸ್ಥಳೀಯರು ಅಶೋಕ ನಗರ ಪೊಲೀಸ್ ಠಾಣೆಗೆ ಮಾಹಿತಿಯನ್ನು ರವಾನಿಸಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿಯನ್ನು ನೀಡಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಶವಾಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ಅಶೋಕ ನಗರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
Kshetra Samachara
30/08/2022 01:19 pm