ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ದಾಯಾದಿಗಳ ನಡುವೆ ಹೊಡೆದಾಟ: ಓರ್ವ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ದಾಯಾದಿಗಳ ನಡುವೆ ಕಲಹ ಏರ್ಪಟ್ಟು ಓರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಹುಬ್ಬಳ್ಳಿ ತಾಲ್ಲೂಕಿನ ಅಂಚಟಗೇರಿ ಗ್ರಾಮದ ಪಕ್ಕೀರಪ್ಪ ಎಂಬಾತನ ಮೇಲೆ ಆತನ ಸಹೋದರರು ಆಸ್ತಿ ವಿಚಾರಕ್ಕೆ ಜಗಳ ತೆಗೆದು ಕಟ್ಟಿಗೆ, ಹಾಗೂ ಸಲಿಕೆಯಿಂದ ಕುತ್ತಿಗೆ ಹಾಗೂ ಬೆನ್ನಿನ ಮೇಲೆ ಹಲ್ಲೆ ಮಾಡಿದ ಪರಿಣಾಮ ಪಕ್ಕೀರಪ್ಪ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕೂಡಲೇ ಆತನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Manjunath H D
Kshetra Samachara

Kshetra Samachara

01/09/2022 08:22 pm

Cinque Terre

48.68 K

Cinque Terre

0

ಸಂಬಂಧಿತ ಸುದ್ದಿ