ಹುಬ್ಬಳ್ಳಿ: ಯುವಕನೊಬ್ಬ ಕ್ಷುಲ್ಲಕ ವಿಚಾರಕ್ಕೆ ಬೇಸತ್ತು ತನ್ನ ಕುತ್ತಿಗೆಗೆ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಗಿರಣಿಚಾಳದಲ್ಲಿ ಈಗಷ್ಟೇ ನಡೆದಿದೆ.ಗಿರಣಿಚಾಳದ ನಿರೂಪಾದಿ ಬಂಡಾರಿ ಎಂಬ ಯುವಕನೆ,ತನ್ನ ಮನೆಯಲ್ಲಿ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಮನೆಯ ಅಕ್ಕಪಕ್ಕದವರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಿಮ್ಸ್ ಆಸ್ಪತ್ರೆಗೆ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
ವಿನಯ ರೆಡ್ಡಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
Kshetra Samachara
03/09/2022 11:20 am