ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನ ಮೇಲೆ ತಲ್ವಾರ ಹಾಗೂ ಸ್ಟೀಕ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಹುಬ್ಬಳ್ಳಿಯಲ್ಲಿ ಬುಧವಾರ ತಡ ರಾತ್ರಿ ನಡೆದಿದೆ.
ಹಳೇ ಹುಬ್ಬಳ್ಳಿಯ ನಿವಾಸಿ ಸೈಯದ್ ಹುಲಮಣಿ ಎಂಬ ಯುವಕ ತನ್ನ ತಮ್ಮನನ್ನು ಕರೆದುಕೊಂಡು ಹೋಗಲು ಎಸ್.ಎಂ ಕ್ರಷ್ಣಾನಗರಕ್ಕೆ ಬಂದಾಗ ಕೆಲವು ಯುವಕರು ಜಗಳ ತೆಗೆದು ಸೈಯದ್ ಮೇಲೆ ತಲ್ವಾರ್ ಹಾಗೂ ಸ್ಟೀಕ್‌ನಿಂದ ಹಲ್ಲೆ ಮಾಡಿದ್ದಾರೆ.
ಗಂಭೀರವಾಗಿ ಗಾಯಗೊಂಡ ಸೈಯದ್‌ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಕಸಬಾಪೇಟ ಪೊಲೀಸರು ಭೇಟಿಯನ್ನು ನೀಡಿದ್ದು ಘಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
Kshetra Samachara
08/09/2022 12:39 pm