ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮ ಮದ್ಯ ಮಾರಾಟ: ಎರಡು ಪ್ರತ್ಯೇಕ ಪ್ರಕರಣ ಬೇಧಿಸಿದ ಹಳೇ ಹುಬ್ಬಳ್ಳಿ ಪೊಲೀಸರು‌...!

ಹುಬ್ಬಳ್ಳಿ: ಗಣೇಶೋತ್ಸವ ಹಿನ್ನೆಲೆಯಲ್ಲಿ ಕೆಲವೊಂದು ದಿನಗಳಲ್ಲಿ ಮದ್ಯ ಮಾರಾಟಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿರ್ಬಂಧ ಹೇರಿದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರ ಹೆಡೆಮುರಿ ಕಟ್ಟುವಲ್ಲಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೌದು.. ಹುಬ್ಬಳ್ಳಿಯ ವೆಂಕಟೇಶ್ವರ ನಗರ ಹಾಗೂ ಆನಂದನಗರದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, ಅವರಿಂದ 17,670ರೂ ಮೌಲ್ಯದ ಮದ್ಯ, 1260 ರೂ ನಗದು, ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಕ್ರಮ ಕೈಗೊಳ್ಳಲಾಗಿದೆ.

ಒಟ್ಟಿನಲ್ಲಿ ಅವಳಿನಗರದಲ್ಲಿ ಅಕ್ರಮ ಚಟುವಟಿಕೆಗಳ ಹೆಚ್ಚುತ್ತಲೇ ಇದೆ. ಈ ನಡುವೆ ಪೊಲೀಸ್ ಕಮೀಷನರೇಟ್ ಕೂಡ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೀಗಿದ್ದರೂ ಚಟುವಟಿಕೆಗಳಿಗೆ ಮಾತ್ರ ಬ್ರೇಕ್ ಬಿಳುತ್ತಿಲ್ಲ.

Edited By : Nirmala Aralikatti
Kshetra Samachara

Kshetra Samachara

09/09/2022 06:47 pm

Cinque Terre

23.15 K

Cinque Terre

0

ಸಂಬಂಧಿತ ಸುದ್ದಿ