ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗಣೇಶೋತ್ಸವದಲ್ಲಿ ಮೊಬೈಲ್ ಕದಿಯುತ್ತಿದ್ದ ಖತರ್ನಾಕ್ ಕಳ್ಳರು ಅಂದರ್

ಹುಬ್ಬಳ್ಳಿ: ಬೇರೆ ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಗಣೇಶೋತ್ಸವ ದಲ್ಲಿ ಸಾರ್ವಜನಿಕರ ಮೊಬೈಲ್ ಕಳ್ಳತನ ಮಾಡಿ ಅವುಗಳನ್ನು ನಗರಕ್ಕೆ ತಂದು ಮಾರುತ್ತಿದ್ದ ಮೊಬೈಲ್ ಕಳ್ಳರ ಗ್ಯಾಂಗ್ ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ನಡೆಯುತ್ತಿದ್ದ ಗಣೇಶೋತ್ಸವದಲ್ಲಿ ಸಾರ್ವಜನಿಕರ ಮೊಬೈಲ್ ಕಳ್ಳತನ ಮಾಡಿಕೊಂಡು ಹುಬ್ಬಳ್ಳಿಗೆ ಬರುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ,ಬೆಂಡಿಗೇರಿ ಠಾಣೆಯ ಪೊಲೀಸರು ಕದ್ದ ಮೊಬೈಲ್ ಗಳು ಸೇರಿದಂತೆ ಕೃತ್ಯಕ್ಕೆ ಬಳಸುತ್ತಿದ್ದ ಕಾರು ಸಮೇತ ಮೂವರು ಆರೋಪಿಗಳನ್ನು ಬಂಧನ ಮಾಡಿದ್ದು.

ಬಂದಿತ ಮೂವರು ಆರೋಪಿಗಳು ಹುಬ್ಬಳ್ಳಿಯ ಸೆಟ್ಲಿಮೆಂಟ್ ನ ನಿವಾಸಿಗಳು ಎಂದು ತಿಳಿದು ಬಂದಿದ್ದು, ಆರೋಪಿಗಳ ಮೇಲೆ ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ,ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

17/09/2022 08:55 pm

Cinque Terre

42.56 K

Cinque Terre

0

ಸಂಬಂಧಿತ ಸುದ್ದಿ