ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಜಗಳ ಪ್ರಾರಂಭವಾಗಿ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಸಂಜೆ ನಡೆದಿದೆ.
ಹುಬ್ಬಳ್ಳಿಯ ದೇವಾಂಗಪೇಟ್‌ನ ಸ್ಮಶಾನದ ಬಳಿ ಇಂದು ಸಂಜೆ ಕೆಲವು ಯುವಕರ ನಡುವೆ ಜಗಳ ಪ್ರಾರಂಭವಾಗಿ ಜಗಳ ಅತಿರೇಕಕ್ಕೆ ಹೋಗಿದೆ. ಈ ವೇಳೆ ಯುವಕರ ಗುಂಪೊಂದು ಕಾರ್ತಿಕ ಹಾಗೂ ನಾಗರಾಜ ಕುತ್ತಿಗೆ ಮತ್ತು ಎದೆಗೆ ಚಾಕು ಇರಿದಿದ್ದಾರೆ. ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ.
ಕೂಡಲೇ ಸ್ಥಳೀಯರು ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಅಶೋಕ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಘಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
Kshetra Samachara
18/09/2022 10:33 pm