ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ದೀಪಕ ಪಟದಾರಿ ಕೊಲೆ ಸಾಕ್ಷಿದಾರರಿಗೆ ಸರ್ಕಾರಿ ಅಧಿಕಾರಿಯಿಂದ ಜೀವ ಬೆದರಿಕೆ : FIR ದಾಖಲು

ಹುಬ್ಬಳ್ಳಿ : ಗ್ರಾಮ ಪಂಚಾಯತಿ ಸದಸ್ಯನ ಕೊಲೆಯ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಟ್ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದು ಇದರ ನಡುವೆಯೇ ಸರ್ಕಾರಿ ಅಧಿಕಾರಿಯೊಬ್ಬ ಕೊಲೆಯ ಪ್ರಕರಣದ ಪ್ರಮುಖ ಸಾಕ್ಷಿದಾರನಿಗೆ ಹಾಗೂ ಸಂಜಯ ಪಟದಾರಿ ಗೆ ಸರ್ಕಾರಿ ಅಧಿಕಾರಿಯೊಬ್ಬ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಶನಿವಾರ ದೇಶಪಾಂಡೆ ನಗರದ ಪ್ರವಾಸಿ ಮಂದಿರದಲ್ಲಿ ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಿ ಕೊಲೆಯ ಪ್ರಕರಣದ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿ,ಊಟಕ್ಕೆಂದು ಹೋಗುತ್ತಿದ್ದ ಸಂಜಯ ಹಾಗೂ ಕೃಷ್ಣಾ ಎಂಬುವರನ್ನು ನಗರದ ಹೊಸೂರು ಸರ್ಕಲ್ ಬಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಉಪವಲಯ ಅರಣ್ಯಾಧಿಕಾರಿ ಪ್ರಕಾಶ ಕರಗುಪ್ಪಿ ಬೈಕ್ ಅಡ್ಡಗಟ್ಟಿ ನಿನ್ನ ಅಣ್ಣನನ್ನು ಕಳುಹಿಸಿದ ಜಾಗಕ್ಕೆ ನಿನ್ನನ್ನು ಕಳುಹಿಸತ್ತೇನೆ ಎಂದು ಜೀವ ಬೆದರಿಕೆ ಒಡ್ಡಿದ್ದಾರೆ.

ಕೂಡಲೇ ಸಂಜಯ ಪಟದಾರಿ ಸಿಐಡಿ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿಯನ್ನು ನೀಡಿದಾಗ ಘಟನೆ ನಡೆದ ಸ್ಥಳದ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಸಿಐಡಿ ಅಧಿಕಾರಿಗಳು ಹೇಳಿದ ಹಿನ್ನೆಲೆಯಲ್ಲಿ,ಅರಣ್ಯಾಧಿಕಾರಿ ಪ್ರಕಾಶ ಕರಗುಪ್ಪಿ ಮೇಲೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಒಡ್ಡಿದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
Kshetra Samachara

Kshetra Samachara

26/09/2022 11:21 am

Cinque Terre

47.01 K

Cinque Terre

1

ಸಂಬಂಧಿತ ಸುದ್ದಿ