ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಪಟದಾರಿ ಸಾವಿಗೆ ನ್ಯಾಯ ಕೇಳಿ ಅಲೆದಾಡುತ್ತಿದ್ದ ಪತ್ನಿ ಪುಷ್ಪಾ ಪಟದಾರಿ ಇಂದು ನವನಗರದ ಸಂಬಂಧಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪುಷ್ಪ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೂ ದೀಪಕ್ ಸಾವಿನಿಂದ ಹಾಗೂ ಹಳೆ ಹುಬ್ಬಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸದೆ ಕಳ್ಳಾಟ ಆಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇನ್ನು ಸದ್ಯ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿದ್ದು ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/09/2022 08:44 pm