ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ: ವರದಿ ಪ್ರಸಾರವಾದ 10 ನಿಮಿಷದಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ: ಸಚಿವ ಹಾಲಪ್ಪ ಆಚಾರ್

ಹುಬ್ಬಳ್ಳಿ: ನಿಮ್ಮ ನೆಚ್ಚಿನ ಪಬ್ಲಿಕ್ ನೆಕ್ಸ್ಟ್‌ನಲ್ಲಿ ಇಂದು ಸಂಜೆ ಬಂಬು(ಪಾಪಡಿ) ಫ್ಯಾಕ್ಟರಿ ಬಗ್ಗೆ ವಿಸ್ತೃತವಾದ ವರದಿ ಪ್ರಸಾರವಾಗಿತ್ತು. ಈ ವರದಿ ಪ್ರಸಾರವಾದ ಕೇವಲ 10 ನಿಮಿಷದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ಸುದ್ದಿಯನ್ನು ನೋಡಿ ನಾಳೆಯೇ ಅಧಿಕಾರಿಗಳಿಗೆ ಫ್ಯಾಕ್ಟರಿಗೆ ಭೇಟಿ ನೀಡಿ ಕ್ರಮ ಕೈಗೂಳ್ಳಲು ಸೂಚನೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಫ್ಯಾಕ್ಟರಿಯಲ್ಲಿ ಸ್ವಚ್ಛತೆ ಹಾಗೂ ಸುರಕ್ಷತೆ ಇಲ್ಲದೆ ಇರೋದನ್ನು ನಾನು ಪಬ್ಲಿಕ್ ನೆಕ್ಸ್ಟ್‌ನಲ್ಲಿ ನೋಡಿದ್ದೇನೆ. ನಾಳೆಯೇ ಜಿಲ್ಲಾಧಿಕಾರಿ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಚನೆ ನೀಡಿ ಫ್ಯಾಕ್ಟರಿಯ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಹೇಳುತ್ತೇನೆ ಎಂದು ಆಚಾರ್ ತಿಳಿಸಿದ್ದಾರೆ.

ಎಲ್ಲಿ ತಪ್ಪು ನಡೆಯುತ್ತದೆಯೋ ಅಲ್ಲಿ ಜಿಲ್ಲಾಡಳಿತ ಸುಮ್ಮನೆ ಬಿಡೋ ಮಾತಿಲ್ಲ. ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಇಂತಹ ಫ್ಯಾಕ್ಟರಿಯ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮವನ್ನು ಜಿಲ್ಲಾಡಳಿತದಿಂದ ಕೈಗೊಳ್ಳುತ್ತೇವೆ ಅಂತಾ ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ವಿನಯ ರೆಡ್ಡಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

29/09/2022 11:01 pm

Cinque Terre

177.79 K

Cinque Terre

12

ಸಂಬಂಧಿತ ಸುದ್ದಿ