ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ವಿಚಾರಕ್ಕೇ ತಲ್ವಾರ್‌ನಿಂದ ಮಾರಾಮಾರಿ; ಓರ್ವನ ಸ್ಥಿತಿ ಗಂಭೀರ

ಹುಬ್ಬಳ್ಳಿ: ದನ ಸಾಗಾಟದ ಬಾಡಿಗೆ ವಿಚಾರಕ್ಕೆ ಗೆಳೆಯರ ನಡುವೆ ಕಲಹ ಏರ್ಪಟ್ಟು ಸಹೋದರರಿಬ್ಬರ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಹುಬ್ಬಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಕಸಬಾಪೇಟ ಪೊಲೀಸ್ ಠಾಣಾ ವ್ಯಾಪ್ತಿಯ ಹಸೈ ಮಲಾದಲ್ಲಿ ದನ ಸಾಗಾಟದ ಬಾಡಿಗೆ ವಿಚಾರಕ್ಕೇ ಗೆಳೆಯರ ನಡುವೆ ಮಾತಿಗೆ ಮಾತು ಬೆಳೆದು ಬೆಪಾರಿ ಸಹೋದರರ ಮೇಲೆ ಆವೇಜ್ ಹಾಗೂ ಉವೇಜ್ ಎಂಬ ಸಹೋದರರ ಮೇಲೆ ತಲ್ವಾರ್ ನಿಂದ ಕೈ,ಕಾಲು,ಹಾಗೂ ಬೆನ್ನಿಗೆ ಹಲ್ಲೆ ಮಾಡಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು,ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಕಿಮ್ಸ್ ಆಸ್ಪತ್ರೆಗೆ ಎಸಿಸಿ ಆರ್ ಕೆ ಪಾಟೀಲ್ ಭೇಟಿಯನ್ನು ನೀಡಿ ಗಾಯಾಳುಗಳಿಂದ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ, ಆದ್ರೆ ಘಟನೆಯ ಕುರಿತು ಆವೇಜ್ ಹಾಗೂ ಉವೇಜ್ ತಂದೆ ಇದು ದ್ವೇಷಕ್ಕಾಗಿ ನಡೆದ ಹಲ್ಲೆ ಎಂದು ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ, ಸದ್ಯ ಕಸಬಾಪೇಟ ಪೊಲೀಸ್ ಠಾಣಾ ವ್ಯಾಪ್ತಿಯ ಹಸೈ ಮಲಾ ದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

ಘಟನೆಗೆ ಸಂಬಂಧಿಸಿದಂತೆ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ತನಿಕೆಯಿಂದಲೇ ಘಟನೆಗೆ ನಿಜವಾದ ಕಾರಣ ಏನು ಎಂಬುದು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ

-ವಿನಯ ರೆಡ್ಡಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

07/10/2022 09:04 am

Cinque Terre

129.87 K

Cinque Terre

12

ಸಂಬಂಧಿತ ಸುದ್ದಿ