ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಶೀಲ ಶಂಕಿಸಿ ಪತ್ನಿಯನ್ನೇ ಕೊಲೆಗೈದು ಕೊನೆಗೆ ತಾನೂ ನೇಣು ಬಿಗಿದುಕೊಂಡ ಪತಿ

ಧಾರವಾಡ: ತನ್ನ ಪತ್ನಿಯ ಶೀಲ ಶಂಕಿಸಿದ ಪತಿರಾಯನೊಬ್ಬ ಆಕೆಯನ್ನು ಕೊಲೆ ಮಾಡಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.

ಶ್ರೀದೇವಿ ರಾಮಾಪುರ ಎಂಬುವವಳೇ ಪತಿಯಿಂದ ಕೊಲೆಯಾದವಳು. ರಾಜು ರಾಮಾಪುರ ಎಂಬಾತನೇ ನೇಣು ಹಾಕಿಕೊಂಡು ಕೊನೆಗೆ ಆತ್ಮಹತ್ಯೆ ಮಾಡಿಕೊಂಡವನು.

ಪತ್ನಿಯ ಮೇಲೆ ಸಂಶಯಪಡುತ್ತಿದ್ದ ರಾಜು, ಆಕೆಯನ್ನು ಹೊಲದಲ್ಲೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಆನಂತರ ತಾನೂ ಹೊಲದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೂರು ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Edited By : Nagaraj Tulugeri
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

11/10/2022 10:16 pm

Cinque Terre

119.65 K

Cinque Terre

6

ಸಂಬಂಧಿತ ಸುದ್ದಿ