ಧಾರವಾಡ: ಸ್ವಾತಂತ್ರ್ಯ ಹೋರಾಟದ ಬೆಳ್ಳಿಚುಕ್ಕಿ ಕಿತ್ತೂರಿನ ರಾಣಿ ಚನ್ನಮ್ಮ ಜಯಂತಿಯನ್ನು ನವಲಗುಂದ ತಾಲೂಕಿನ ಶಿರೂರು ಗ್ರಾಮದಲ್ಲಿ ಪಂಚಮಸಾಲಿ ಮುಖಂಡರು ಅದ್ಧೂರಿಯಾಗಿ ಆಚರಿಸಿದರು.
ರೈತ ಮುಖಂಡ ಮಲ್ಲಿಕಾರ್ಜುನಗೌಡ ಬಾಳನಗೌಡರ ನೇತೃತ್ವದಲ್ಲಿ ರಾಣಿ ಚನ್ನಮ್ಮಳ ಭಾವಚಿತ್ರವನ್ನು ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ನಂತರ ಒಂದೆಡೆ ಸಭೆ ಸೇರಿ ಬ್ರಿಟೀಷರ ವಿರುದ್ಧ ಸಮರ ಸಾರಿದ ರಾಣಿ ಚನ್ನಮ್ಮಳ ಕಾರ್ಯ ವೈಖರಿಯನ್ನು ಕೊಂಡಾಡಿದರು.
Kshetra Samachara
23/10/2020 04:27 pm