ಧಾರವಾಡ: ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬಗಳು ಬಹಳ ವೈಶಿಷ್ಟ್ಯಪೂರ್ಣವಾಗಿ ಆಚರಿಸಲ್ಪಡುತ್ತವೆ. ಸೋಮವಾರ ನಡೆದ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬವನ್ನು ಧಾರವಾಡ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಧಾರವಾಡ ತಾಲೂಕಿನ ಹೆಬ್ಬಳ್ಳಿ, ಉಪ್ಪಿನ ಬೆಟಗೇರಿ, ಗರಗ, ತಡಕೋಡ ಸೇರಿದಂತೆ ಜಿಲ್ಲೆಯಾದ್ಯಂತ ಹಬ್ಬವನ್ನು ಆಚರಿಸಲಾಯಿತು.
ಸಂಜೆ ಹೊತ್ತಿಗೆ ಸಾರ್ವಜನಿಕರು ಬನ್ನಿ ಮರಕ್ಕೆ ಪೂಜೆ ಸಲ್ಲಿಸಿ ಬನ್ನಿ ಎಲೆ ತಂದು ನಾವೂ ನೀವೂ ಬನ್ನಿ ತುಗೊಂಡು ಬಂಗಾರದಂಗ ಇರೋನ್ರಿ ಎಂದು ಪರಸ್ಪರ ಶುಭಾಷಯ ವಿನಿಮಯ ಮಾಡಿಕೊಂಡರು.
ಪಾಂಡವರು ವನವಾಸಕ್ಕೆ ಹೋಗುವ ಸಂದರ್ಭದಲ್ಲಿ ತಮ್ಮ ಆಯುಧಗಳನ್ನು ಬನ್ನಿ ಮರದಲ್ಲಿ ಇಟ್ಟು ಹೋಗಿದ್ದರಂತೆ ಹೀಗಾಗಿ ಆಯುಧ ಪೂಜೆ ಹಾಗೂ ಬನ್ನಿ ಮರಕ್ಕೆ ಈ ರೀತಿ ಪೂಜೆ ಸಲ್ಲಿಸುವ ಸಂಪ್ರದಾಯ ರೂಢಿಯಲ್ಲಿದೆ.
Kshetra Samachara
26/10/2020 06:58 pm