ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ : ಸಾಧಕರಿಗೆ ಸನ್ಮಾನ

ಧಾರವಾಡ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿ.ಪಂ.ಸಿಇಓ ಡಾ.ಬಿ.ಸುಶೀಲಾ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಪಡೆದು ಉತ್ತಿರ್ಣರಾಗಿರುವ ವಿದ್ಯಾರ್ಥಿಗಳಿಗೆ ನೀಡುವ ಜಡಗ ಮತ್ತು ಬಾಲ ಪ್ರಶಸ್ತಿ ಮೊತ್ತ ಒಂದು ಲಕ್ಷ ರೂಗಳನ್ನು ಅವಿನಾಶ ವೀರಣ್ಣಾ ಜವಳಗೇರಿ ( 618 ಅಂಕ ) ಹಾಗೂ ಪ್ರಿಯಾ ಪ್ರಕಾಶ ಹಂಚಿನಮನಿ (615 ಅಂಕ) ಅವರಿಗೆ ಆರ್‍ಟಿಜಿಎಸ್ ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ.

ಇಂದು ಜರುಗಿದ ಮಹಿರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಜಿ.ಪಂ ಸಿಇಓ ಡಾ.ಬಿ.ಸುಶೀಲಾ ಅವರು ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರದೊಂದಿಗೆ ಫಲಪುಷ್ಪ ನೀಡಿ ಸನ್ಮಾನಿಸಿದರು.ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದೀನಕರ, ಡಿಡಿಪಿಐ ಎಮ್.ಎಲ್.ಹಂಚಾಟೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಹಪ್ಪ ಸೊಗಲದ ಹಾಗೂ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದ್ಯಸರು, ಇತರ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

Edited By : Manjunath H D
Kshetra Samachara

Kshetra Samachara

31/10/2020 01:44 pm

Cinque Terre

10.58 K

Cinque Terre

1

ಸಂಬಂಧಿತ ಸುದ್ದಿ