ಧಾರವಾಡ : ಜಿಲ್ಲಾಡಳಿತದಿಂದ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ಯ ಸಂಕಲ್ಪದಿನ ಹಾಗೂ ಮಾಜಿ ಉಪ ಪ್ರಧಾನಿ ವಲ್ಲಭ ಭಾಯಿ ಪಟೇಲ ಅವರ ಜನ್ನದಿನದ ನಿಮಿತ್ಯ ರಾಷ್ಟ್ರೀಯ ಏಕತಾದಿನ ಆಚರಿಸಲಾಯಿತು.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಅವರು ಮಾಜಿ ಪ್ರಧಾನಿ ಇಂದಿರಾಗಾಂಧಿ ಹಾಗೂ ಮಾಜಿ ಉಪಪ್ರಧಾನಿ ವಲ್ಲಭಬಾಯಿ ಪಟೇಲ ಅವರ ಭಾವಚಿತ್ರಕ್ಕೆ ಪುಷ್ಪಾಪರ್ಣೆ ಮಾಡಿದರು.
ನಂತರ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಸಂಕಲ್ಪ ದಿನದ ಮತ್ತು ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಭಾಗವಹಿಸಿ, ಪ್ರತಿಜ್ಞೆಯನ್ನು ಸ್ವೀಕರಿಸಿದರು.
Kshetra Samachara
31/10/2020 03:30 pm