ಧಾರವಾಡ: ಕೊರೊನಾ ಹಿನ್ನೆಲೆಯಲ್ಲಿ ಭಾನುವಾರ ಕರ್ನಾಟಕ ರಾಜ್ಯೋತ್ಸವವನ್ನು ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಆಚರಣೆ ಮಾಡಲಾಯಿತು. ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ನೆರವೇರಿಸಿದರು.
ಪ್ರಸಕ್ತ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ಶಾಲಾ, ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಧ್ವಜಾರೋಹಣ ಹಾಗೂ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ವಿವಿಧ ಪೊಲೀಸ್ ಪಡೆಗಳಿಂ ಗೌರವ ವಂದನೆ ಸ್ವೀಕರಿಸಿದರು.
Kshetra Samachara
01/11/2020 10:17 am