ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ತರಬೇತಿ ಪಡೆದು ಪ್ರತಿಯೊಬ್ಬರೂ ಉದ್ಯಮಶೀಲರಾಗಬೇಕು : ಎನ್.ಆರ್ ಪುರುಷೋತ್ತಮ

ಧಾರವಾಡ : ಇತ್ತೀಚಿನ ದಿನಗಳಲ್ಲಿ ಮೊಬೈಲ್‍ಗಳಿಲ್ಲದ ಮನೆಗಳಿಲ್ಲ, ವ್ಯಕ್ತಿಗಳಿಲ್ಲ ಪ್ರತಿಯೊಬ್ಬರೂ ಮೊಬೈಲ್ ಬಳಕೆ ಮಾಡುತ್ತಿದ್ದಾರೆ, ಸರ್ಕಾರದಿಂದ 30 ದಿನಗಳ ಮೊಬೈಲ್ ಹ್ಯಾಂಡ್‍ಸೆಟ್ ರಿಪೇರಿ ತರಬೇತಿ ನೀಡುತ್ತಿದೆ. ಇದರ ಸದುಪಯೋಗ ಪ್ರತಿಯೊಬ್ಬರೂ ತೆಗೆದುಕೊಂಡು ಕುಟುಂಬ ನಿರ್ವಹಣೆಗೆ ಸ್ವಾವಲಂಬನೆಯ ಹಾದಿ ಕಂಡುಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ ಹೇಳಿದರು.

ನಗರದ ಮಾಳಮಡ್ಡಿಯ ಲಿಂಗರಾಜ ಭವನ ಪ್ರೆಸ್ ಆವರಣದ ಭವಾನಿ ನೃತ್ಯ ಶಾಲೆಯಲ್ಲಿ ಏರ್ಪಡಿಸಿರುವ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಸಹಯೋಗದಲ್ಲಿ 30 ದಿನಗಳ ಮೊಬೈಲ್ ಹ್ಯಾಂಡ್‍ಸೆಟ್ ರಿಪೇರಿ ಮತ್ತು ಸೇವಾ ಕೌಶಲ್ಯ ಆಧಾರಿತ ತರಬೇತಿಯಲ್ಲಿ ಭಾಗವಹಿಸಿ ಮಾತನಾಡಿದರು.

ಸಿಡಾಕ್ ಜಂಟಿ ನಿರ್ದೇಶಕ ಚಂದ್ರಶೇಖರ ಅಂಗಡಿ, ತರಬೇತಿದಾರರಾದ ಮೌನೇಶ ಬಡಿಗೇರ, ರೋಹಿಣಿ ಘಂಟಿ, ರಂಜನಾ ಪೇಟೆ ವಿದ್ಯಾರ್ಥಿಗಳು ಇದ್ದರು.

Edited By : Manjunath H D
Kshetra Samachara

Kshetra Samachara

04/11/2020 04:25 pm

Cinque Terre

11.96 K

Cinque Terre

0

ಸಂಬಂಧಿತ ಸುದ್ದಿ