ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪತ್ರಿಕೋದ್ಯಮ ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು- ಮಂಜುನಾಥ್ ಡೊಳ್ಳಿನ

ಧಾರವಾಡ: ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಕೌಶಲ್ಯ ಹಾಗೂ ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು. ಅಂದಾಗ ಮಾತ್ರ ಉದ್ಯೋಗವಕಾಶಗಳು ಲಭ್ಯವಾಗುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ ಹೇಳಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಹನ ಕೂಟದ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಮಾಧ್ಯಮದ ವ್ಯಾಖ್ಯೆ ಬದಲಾಗಿದೆ. ವಿವಿಧ ಮಾಧ್ಯಮಗಳ ಕಾರ್ಯನಿರ್ವಹಣೆಗೆ ಬರವಣಿಗೆಯೇ ಮುಖ್ಯವಾಗಿದೆ. ಅದರ ಮಹತ್ವ ಎಂದೂ ಕಡಿಮೆಯಾಗಲಾರದು. ಉತ್ತಮ ಬರಹಗಾರರಾಗಬೇಕಾದರೆ ಮೊದಲು ಉತ್ತಮ ಓದುಗರಾಗಬೇಕು. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಕ್ಷೇತ್ರಗಳಲ್ಲಿ ಹೆಚ್ಚಿನ ಜ್ಞಾನ ಸಂಪಾದಿಸಬೇಕು ಎಂದು ತಿಳಿಸಿದರು

ವಿಭಾಗದ ಮುಖ್ಯಸ್ಥ ಪ್ರೊ. ಜೆ.ಎಂ. ಚಂದುನವರ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಭಾಗದ ವಿದ್ಯಾರ್ಥಿಗಳು ವಿವಿಧ ದಿನಪತ್ರಿಕೆಗಳಿಗೆ ಬರೆದ ಲೇಖನಗಳ ಸಂಗ್ರಹ ‘ಮಾಧ್ಯಮ ಹೊಂಗಿರಣ’ ಪುಸ್ತಕವನ್ನು ಹಾಗೂ ಸಂವಹನಕೂಟದ ವಾರ್ಷಿಕ ವರದಿಯನ್ನು ಮಂಜುನಾಥ ಡೊಳ್ಳಿನ ಬಿಡುಗಡೆಗೊಳಿಸಿದರು ಬಸನಗೌಡ ಪಾಟೀಲ್ ವಾರ್ಷಿಕ ವರದಿ ವಾಚಿಸಿದರು.ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಂಜಯಕುಮಾರ ಮಾಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Edited By : Vijay Kumar
Kshetra Samachara

Kshetra Samachara

05/11/2020 11:33 pm

Cinque Terre

8.94 K

Cinque Terre

0

ಸಂಬಂಧಿತ ಸುದ್ದಿ