ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಕೃಷಿ ವಿವಿ 34 ನೇ ಸಂಸ್ಥಾಪನಾ ದಿನಾಚರಣೆ :ಪ್ರತಿ ಗ್ರಾ.ಪಂ.ನಲ್ಲಿ ಮಣ್ಣು ಪರೀಕ್ಷಾ ಕೇಂದ್ರ ಸ್ಥಾಪನೆಗೆ ಪ್ರಸ್ತಾವನೆ - ಕೃಷಿ ಸಚಿವ ಬಿ.ಸಿ.ಪಾಟೀಲ

ಧಾರವಾಡ :ಆಹಾರ ಸಂಸ್ಕರಣೆ ಘಟಕಗಳಿಗೆ ಪ್ರಧಾನ ಮಂತ್ರಿಗಳ ಆತ್ಮನಿರ್ಭರ ಯೋಜನೆಯಡಿ 10 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ ಈ ನಿಟ್ಟಿನಲ್ಲಿ ರೈತರು ಹೆಜ್ಜೆಯಿಟ್ಟು ಆರ್ಥಿಕ ಸದೃಢತೆ ಸಾಧಿಸಬೇಕು.ರಾಜ್ಯದ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿಯೂ ಒಂದು ಮಣ್ಣು ಪರೀಕ್ಷಾ ಕೇಂದ್ರ ಸ್ಥಾಪಿಸುವ ಪ್ರಸ್ತಾವನೆ ಇದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ ಹೇಳಿದರು.

ನಗರದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಏರ್ಪಡಿಸಿದ್ದ ವಿಶ್ವವಿದ್ಯಾಲಯದ 34 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ನ್ಯೂಸ್ ಲೆಟರ್,ಕೃತಿಗಳ ಬಿಡುಗಡೆ:* ವಿವಿಧ ತರಬೇತಿಗಳ ಡಿವಿಡಿಗಳನ್ನು ಹಾಗೂ ಸ್ಟಾರ್ಟ್ ಅಪ್ ಪ್ರೊಜೆಕ್ಟ್ ಗಳು , ಇಂಗ್ಲಿಷ್ ಕಲಿಕಾ ಲ್ಯಾಬ್ ಸಾಫ್ಟ್‌ವೇರುಗಳನ್ನು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು.

ಪ್ರಶಸ್ತಿ ಪ್ರದಾನ: ಕೃಷಿಯಲ್ಲಿ ಬೋಧನೆ,ಸಂಶೋಧನಾ ಕ್ಷೇತ್ರದಲ್ಲಿ ಸಾಧನೆಗೈದಿರುವ 76 ಗಣ್ಯರಿಗೆ, ಕೃಷಿ ವಿ.ವಿ.ಶಿಕ್ಷಕ,ಶಿಕ್ಷಕೇತರ ಸಿಬ್ಬಂದಿಗೆ ಪ್ರಶಸ್ತಿಗಳನ್ನು ನೀಡಿ ಸಚಿವರು ಗೌರವಿಸಿದರು.

Edited By : Nagesh Gaonkar
Kshetra Samachara

Kshetra Samachara

11/11/2020 03:37 pm

Cinque Terre

15.02 K

Cinque Terre

0

ಸಂಬಂಧಿತ ಸುದ್ದಿ