ಧಾರವಾಡ: ಧಾರವಾಡದಲ್ಲಿರುವ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ವೆಬಸೈಟ್ ನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಗುರುವಾರ ಉದ್ಘಾಟಿಸಿದರು.
ಅಕಾಡೆಮಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಗುಡಸಿ ಪಾಲ್ಗೊಂಡಿದ್ದರು.
ಕರ್ನಾಟಕ ಬಾಲವಿಕಾಸ ಅಕಾಡೆಮಿ ಇಡೀ ರಾಜ್ಯಕ್ಕೆ ಸಂಬಂಧಿಸಿದ್ದಾಗಿದ್ದು, ಮಕ್ಕಳ ಕುರಿತಾದ ವಿವಿಧ ಕಾರ್ಯಕ್ರಮಗಳ ಮಾಹಿತಿ, ಯೋಜನೆಗಳ ಮಾಹಿತಿ, ಅಕಾಡೆಮಿಯ ವಿವಿಧ ಕಾರ್ಯಚಟುವಟಿಕೆಗಳು karnatakastatebalavikasacademy.com ಈ ವೆಬಸೈಟ್ ಮೂಲಕ ಸಿಗಲಿವೆ.
Kshetra Samachara
19/11/2020 01:57 pm