ಕಲಘಟಗಿ: ಪಟ್ಟಣದ ಜಾನಪದ ಕಲಾವಿದರಾದ ಮಲ್ಲಯ್ಯಸ್ವಾವಿು ತೋಟಗಂಟಿ ಅವರಿಗೆ ಜಾನಪದ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ 2019ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಜರುಗಿದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಈ ಸಂದರ್ಭದಲ್ಲಿ ಸಾಹಿತಿ ಡಾ.ಸಿದ್ದಲಿಂಗಯ್ಯ,ಜಾನಪದ ಅಕಾಡೆಮಿ ಅಧ್ಯಕ್ಷರಾದ ಮಾತಾ ಬಿ. ಮಂಜಮ್ಮ ಜೋಗತಿ, ಹಂಪಿಯ ಮಿಶ್ರಾಂತ ಕುಲಪತಿ ಡಾ.ಹಿ.ಚಿ.ಬೋರಲಿಂಗಯ್ಯಾ,ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಾರ್ಯರ್ದಶಿ ಶ್ರೀಮತಿ ವಿ.ರಶ್ಮಿ ಮಹೇಶ,ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನಿರ್ದೆಶಕ ಎಸ್ ರಂಗಪ್ಪ ಉಪಸ್ಥಿತರಿದ್ದರು.
Kshetra Samachara
22/11/2020 04:55 pm