ಹುಬ್ಬಳ್ಳಿ: ಹುಬ್ಬಳ್ಳಿಯ ಗಂಗಾಧರ ನಗರದ ಕೆಡಿಓ ಜೈನ್ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಹಾಗೂ ವಾರ್ತಾ ಇಲಾಖೆ ಸಹಯೋಗದಲ್ಲಿ ಕೋವಿಡ್ ಕುರಿತಾಗಿ ಸಾರ್ವಜನಿಕರಿಗೆ ಆಯೋಜಿಸಲಾದ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ನ್ಯಾಯಾಧೀಶರ ಹಾಗೂ ಔದ್ಯಮಿಕ ನ್ಯಾಯಾಧಿಕರಣ ಅಧ್ಯಕ್ಷಧಿಕಾರಿ ಜಿ.ಎ.ಮೂಲಿಮನಿ ಉದ್ಘಾಟಿಸಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಮಾದೇಶ್ ವಿ. ವೈದ್ಯಾಧಿಕಾರಿ ಸತೀಶ್ ಸೇರಿದಂತೆ ಮತ್ತಿತರು ಭಾಗವಹಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು ಕೋವಿಡ್ ಜಾಗೃತಿ ಮೂಡಿಸಲಾಯಿತು.
Kshetra Samachara
24/11/2020 10:14 pm