ಹುಬ್ಬಳ್ಳಿ: ದಾಸ ಶ್ರೇಷ್ಠ ಕನಕದಾಸರ 533ನೇ ಜಯಂತೋತ್ಸವದ ಅಂಗವಾಗಿ ಭಾರತೀಯ ಜನತಾ ಪಕ್ಷದ ವತಿಯಿಂದ ಹುಬ್ಬಳ್ಳಿಯ ದುರ್ಗದಬೈಲ್ ನಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಣೆ ಮಾಡಲಾಯಿತು.
ಶಾಸಕ ಅರವಿಂದ ಬೆಲ್ಲದ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿ ಬಳಿಕ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.ಇದೇ ವೇಳೆ ಪರಸ್ಪರ ಸಿಹಿ ಹಂಚಿ ಕನಕದಾಸರ ಜಯಂತೋತ್ಸವ ಆಚರಣೆ ಮಾಡಿದರು.
Kshetra Samachara
03/12/2020 12:37 pm