ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಸರಳವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕನಕದಾಸರ ಜಯಂತಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಮುಖಂಡರಾದ ಬಸವರಾಜ ದೇವರು, ಯಲ್ಲಮ್ಮ ನಾಯ್ಕರ್, ಲೋಹಿತ ನಾಯ್ಕರ, ಬಸವರಾಜ್ ಮಲಕಾರಿ, ಮಂಜು ನಡಟ್ಟಿ, ರಮೇಶ್ ನಲವಡಿ, ಕಲ್ಲಪ್ಪ ಕರಿಗಾರ್, ಜುಂಜಪ್ಪ ಕಮಳಿ, ಹರೀಶ್ ಪಾಟೀಲ್, ರವಿ ಐರಾಣಿ, ರಾಮಪ್ಪ ಐರಾಣಿ, ಸೇರಿದಂತೆ ಹಲವಾರು ಗಣ್ಯರು, ಅಧಿಕಾರಿಗಳು, ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
03/12/2020 01:26 pm