ಧಾರವಾಡ : ನುಗ್ಗಿಕೇರಿ ಆಂಜನೇಯ ದೇವಸ್ಥಾನಕ್ಕೆ ಇಂದು ರಾತ್ರಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಭೇಟಿ ನೀಡಿ ಕಾರ್ತಿಕ ಮಾಸದ ನಿಮಿತ್ತ ಆಂಜನೇಯ ದರ್ಶನ ಪಡೆದು ಜಾಗಟೆ ಬಾರಿಸಿ ವಿಶೇಷ ಪೂಜೆ ಸಲ್ಲಿಸಿದರು.
ನಗರದ ಹೊಸಯಲ್ಲಾಪೂರದ ಲಕಮನಹಳ್ಳಿ ಪ್ರದೇಶದಲ್ಲಿಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುದಾನ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಡಿಯಲ್ಲಿ ನಿರ್ಮಿಸಲಾಗಿರುವ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣಾ ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿದ ಅವರು,ಕಾರ್ಯಕ್ರಮ ಮುಗಿದ ನಂತರ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯ ದೇವರಿಗೆ ವಿಶೇಷ ದೀಪ ಬೆಳಗಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
Kshetra Samachara
05/12/2020 10:34 pm