ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಡಾ.ಬಿ.ಆರ್. ಅಂಬೇಡ್ಕರ್ ಅವರ ‘ಮಹಾ ಪರಿನಿರ್ವಾಣ ದಿನ’ ಪುತ್ಥಳಿಗೆ ಮಾಲಾರ್ಪಣೆ,ನಮನ

ಧಾರವಾಡ : ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ ಡಾ.ಬಿ.ಆರ್. ಅಂಬೇಡ್ಕರ್ ಅವರ ‘ಮಹಾ ಪರಿನಿರ್ವಾಣ ದಿನ’ದ ಅಂಗವಾಗಿ ನಗರದ ಕಲಾಭವನದ ಹತ್ತಿರವಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಶಾಸಕರಾದ ಅರವಿಂದ ಬೆಲ್ಲದ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಮಾಲಾರ್ಪಣೆ ಹಾಗೂ ಪುಷ್ಪಾರ್ಪಣೆ ಮಾಡಿ ನಮನ ಸಲ್ಲಿಸಿದರು.ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ.ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ನಂತರ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

Edited By : Manjunath H D
Kshetra Samachara

Kshetra Samachara

06/12/2020 07:15 pm

Cinque Terre

27.32 K

Cinque Terre

1

ಸಂಬಂಧಿತ ಸುದ್ದಿ