ಧಾರವಾಡ : ನ್ಯಾ.ಎ.ಜೆ ಸದಾಶಿವ ಆಯೋಗ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಕಡಪಾ ಮೈದಾನದಲ್ಲಿ ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಕಡಪಾ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ,ಸರ್ಕಾರ ಆದಷ್ಟು ಬೇಗ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
Kshetra Samachara
09/12/2020 05:32 pm