ಹುಬ್ಬಳ್ಳಿ: ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ಲಿಂಗರಾಜನಗರದ ವೀರಾಂಜನೇಯ ದೇವಸ್ಥಾನದಲ್ಲಿಂದು ಕಾರ್ತಿಕ ದೀಪೋತ್ಸವ ಹಮ್ಮಿಕೊಳ್ಳಲಾಯಿತು.
ವೀರಾಂಜನೇಯ ಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಅಲಂಕಾರದೊಂದಿಗೆ ಕುಂಕುಮಾರ್ಚನೆ ಹಾಗೂ ಮಹಾಮಂಗಳಾರುತಿ ಬೆಳಗಿ ಪೂಜೆ ಸಲ್ಲಿಸಲಾಯಿತು. ಬಳಿಕ ಭಕ್ತರು ದೀಪಾರಾಧನೆಯೊಂದಿಗೆ ಕಾರ್ತಿಕ ದೀಪೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.
Kshetra Samachara
13/12/2020 12:48 pm