ಕುಂದಗೋಳ : ಪಟ್ಟಣ ಪಂಚಾಯಿತಿ ವತಿಯಿಂದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು "ದೀನದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ" ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ-ಯೋಜನೆಯ ಕಿರು ಸಾಲ ಮೇಳ ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷ ವಾಸು ಗಂಗಾಯಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಪಟ್ಟಣ ಪಂಚಾಯಿತಿ ವತಿಯಿಂದ ಮಂಜೂರಾದ ಪಟ್ಟಣದ ಬೀದಿ ವ್ಯಾಪಾರಿಗಳಿಗೆ ಸಾಲದ ಚೆಕ್ ವಿತರಣೆ ಮಾಡಲಾಯಿತು. ಈ ವೇಳೆ ಮಾತನಾಡಿದ ಪಟ್ಟಣ ಪಂಚಾಯಿತಿ ಅಧ್ಯಕ್ಷರು ವ್ಯಾಪಾರಿಗಳು ಸರ್ಕಾರ ನೀಡುವ ಸಾಲ ಸೌಲಭ್ಯ ಪಡೆದು ತಮ್ಮ ವ್ಯಾಪಾರದಲ್ಲಿ ಉನ್ನತಿ ಸಾಧಿಸಿ ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಭುವನೇಶ್ವರಿ ಕವಲಗೇರಿ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ್ ಗೋಂದಕರ್ ಹಾಗೂ ಪಟ್ಟಣ ಪಂಚಾಯಿತಿ ಎಲ್ಲ ಸದಸ್ಯರು ಕೌಶಲ್ಯಾಭಿವೃದ್ಧಿ ಅಧಿಕಾರಿ ರವಿ ಮುನವಳ್ಳಿ ಉಪಸ್ಥಿತರಿದ್ದರು.
Kshetra Samachara
16/12/2020 02:48 pm