ನವಲಗುಂದ : ನವಲಗುಂದ ತಾಲೂಕಾ ದಂಡಾಧಿಕಾರಿಗಳ ಕಚೇರಿಯಲ್ಲಿ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಸಮಾಜದ ಬಾಂಧವರೊಂದಿಗೆ ಮಹರ್ಷಿ ವಾಲ್ಮಿಕಿ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆಯೊಂದಿಗೆ ಆಚರಿಸಲಾಯಿತು.
ತಹಶೀಲ್ದಾರ್ ಅನೀಲ ಬಡಿಗೇರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕ ಪಂಚಾಯತ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು ಅಧ್ಯಕ್ಷರು ಹಾಗು ಸದಸ್ಯರು, ಮತ್ತು ಸಮಾಜ ಕಲ್ಯಾಣ ಇಲಾಖೆ, ಪೋಲೀಸ್ ಇಲಾಖೆ, ಅಬಕಾರಿ ಇಲಾಖೆ, ಜಿಲ್ಲಾ ಪಂಚಾಯತ ಉಪವಿಭಾಗ ನವಲಗುಂದ ಹಾಗು ಕೃಷಿ ಇಲಾಖೆ ನವಲಗುಂದ ಹಾಗೂ ಇನ್ನಿತರೆ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.
Kshetra Samachara
09/10/2022 04:25 pm