ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಬಾಲ್ಯವಿವಾಹ ನಿಷೇಧ, ಹಲವು ಕಾರ್ಯಕ್ರಮಗಳ ಜನಜಾಗೃತಿ ಸಂಚಾರಿ ವಾಹನಕ್ಕೆ ಚಾಲನೆ

ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸೇರಿದಂತೆ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಬಾಲ್ಯವಿವಾಹ ನಿಷೇಧ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಮಕ್ಕಳ ಮಾರಾಟ ಹಾಗೂ ಸಾಗಣೆ ಮತ್ತು ಕಾನೂನು ಬಾಹಿರ ದತ್ತು ಕುರಿತು ಸಂಚಾರಿ ವಾಹನ ಮೂಲಕ ಜನಜಾಗೃತಿ ಕಾರ್ಯಕ್ರಮಕ್ಕೆ ಇಂದು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಮೇಶ್ ಎಮ್. ಅಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿ ಚಾಲನೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಚಿಣ್ಣನ್ನವರ ಆರ್.ಎಸ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಶೋಕ ಯರಗಟ್ಟಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ,

ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಶೆಟ್ಟರ್ ಸೇರಿದಂತೆ ಇತರರು ಇದ್ದರು.

Edited By : Nagesh Gaonkar
Kshetra Samachara

Kshetra Samachara

23/09/2020 12:37 pm

Cinque Terre

9.07 K

Cinque Terre

0

ಸಂಬಂಧಿತ ಸುದ್ದಿ