ಧಾರವಾಡ : ಜಿಲ್ಲೆಯು ಕರ್ನಾಟಕದಲ್ಲಿ ಕೇಂದ್ರ ಸ್ಥಾನದಲ್ಲಿದೆ.ಹುಬ್ಬಳ್ಳಿ ವಿಮಾನ ನಿಲ್ದಾಣ,ರೈಲ್ವೆ ನಿಲ್ದಾಣ ಒಳ್ಳೆಯ ರಸ್ತೆ ಮಾರ್ಗಗಳಿವೆ ಪ್ರವಾಸೋದ್ಯಮ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಇಂದು ಬೆಳಿಗ್ಗೆ ಧಾರವಾಡ ರಂಗಾಯಣದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಪ್ರವಾಸೋದ್ಯಮ- ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಧಾರವಾಡ ಜಿಲ್ಲೆಯಲ್ಲಿ ಉತ್ತಮ ಹವಾಮಾನ ಇದೆ,ಕಲಘಟಗಿ, ಅಳ್ನಾವರದಲ್ಲಿ ಮಲೆನಾಡು ಸ್ಥಳಗಳಿವೆ. ಜಿಲ್ಲಾಡಳಿತ ಒಂದು ಟಾಸ್ಕ್ ಫೋರ್ಸ್ ರಚಿಸಿ ಜಿಲ್ಲೆಗೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ರೂಪುರೇಷೆ ಹಾಕಲಾಗುವುದು. ಜಿಲ್ಲೆಯಲ್ಲಿ ಒಂದೆರಡು ದಿನ ಅಥವಾ ಒಂದು ವಾರ ಕಾಲ ವೀಕ್ಷಿಸಬಹುದಾದ ಜಿಲ್ಲೆಯ ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿಯನ್ನು ವೆಬ್ ಸೈಟಿನಲ್ಲಿ ಅಳವಡಿಸಲು ಕ್ರಮವಹಿಸಲಾಗುವುದು ಎಂದರು.
ಸಾಫ್ಟವೇರ್ ಇಂಜಿನಿಯರ್ ಗಳು ತಮ್ಮ ಕಂಪನಿ ಕೆಲಸಗಳನ್ನು ಬಿಟ್ಟು ,ಕೃಷಿ ಕ್ಷೇತ್ರದ ಕಡೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.ನಮ್ಮ ಪೂರ್ವಜರು ಉತ್ತಮ ಆಹಾರ ಸೇವನೆ ಮಾಡುತ್ತಿದ್ದರು. ಈಗ ನಾವು ವಿಷಪೂರಿತ ಆಹಾರ ಸೇವಿಸುತ್ತಿದ್ದೇವೆ ಎಂದು ಅವರು ಹೇಳಿದರು.
ನೇಚರ್ ಫಸ್ಟ್ ಇಕೋ ವಿಲೇಜ್ ಸಂಸ್ಥಾಪಕರಾದ ಪಿ.ವಿ ಹಿರೇಮಠ ಮಾತನಾಡಿ, ಪ್ರವಾಸೋದ್ಯಮ ಮತ್ತು ಗ್ರಾಮೀಣಾಭಿವೃದ್ಧಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಉಪವಿಭಾಗಾಧಿಕಾರಿ ಡಾ.ಜಿ ಗೋಪಾಲಕೃಷ್ಣ,ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ,ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಚೇತನ ಕ್ಯಾಸನೂರ ನಿರೂಪಿಸಿದರು. ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಮಂಜುನಾಥ ದೊಡ್ಡಮನಿ ಇದ್ದರು.
Kshetra Samachara
27/09/2020 07:19 pm