ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಬಂದಿದೆ ಪ್ರಾಣಿಗಳಿಗೆ ಸಂಚಾರಿ ಚಿಕಿತ್ಸಾಲಯ....ಪ್ರಾಣಿ ಪ್ರಿಯರಿಗೆ ಇಲ್ಲಿದೆ ಸಂತಸದ ಸುದ್ದಿ

ಧಾರವಾಡ : ಹ್ಯುಮೇನ್ ಸೂಸೈಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯು ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸಮುದಾಯ ಪ್ರಾಣಿಗಳ ಆರೋಗ್ಯ ರಕ್ಷಣೆ ಲಸಿಕೆ ಮತ್ತು ಸಂತಾನೋತ್ಪತ್ತಿ ನಿಯಂತ್ರಣ ಮತ್ತಿತರ ತುರ್ತು ವೈದ್ಯಕೀಯ ಆರೈಕೆಯನ್ನು ಪ್ರಾಣಿಗಳಿಗೆ ಒದಗಿಸಲು ನೀಡಿರುವ ಉತ್ತರ ಕರ್ನಾಟಕದ ಪ್ರಥಮ ಸಂಚಾರಿ ಪ್ರಾಣಿ ಚಿಕಿತ್ಸಾಲಯವನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಲೋಕಾರ್ಪಣೆ ಮಾಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಾಹನ ವೀಕ್ಷಿಸಿ ಮಾತನಾಡಿದ ಅವರು, ಸಮುದಾಯದ ನಾಯಿಗಳು, ಬೆಕ್ಕುಗಳು, ಬೀದಿ ಪ್ರಾಣಿಗಳ ಸಂರಕ್ಷಣೆಗೆ ಈ ಚಿಕಿತ್ಸಾಲಯ ನೆರವಾಗಲಿದೆ. ಎಚ್‍ಎಸ್‍ಐ ಸಂಸ್ಥೆಯ ಈ ಕೊಡುಗೆ ಶ್ಲಾಘನೀಯವಾಗಿದೆ ಎಂದರು. ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಪರಮೇಶ್ವರ ನಾಯಕ್,ಎಚ್ ಎಸ್ ಐ ಇಂಡಿಯಾದ ಕಾರ್ಯಕ್ರಮ ವ್ಯವಸ್ಥಾಪಕ ಹೇಮಂತ್ ಬ್ಯಾಟರಾಯ್, ಡಾ.ವಿನಿತಾ ಪೂಜಾರಿ,ಡಾ.ಧೀರಜ್ ವೀರನಗೌಡರ್ ಇದ್ದರು.

ಹುಬ್ಬಳ್ಳಿ ಧಾರವಾಡದಲ್ಲಿ ಪ್ರಾಣಿಗಳ ತುರ್ತುಪರಿಸ್ಥಿತಿ ಚಿಕಿತ್ಸೆಗೆ ಸಹಾಯವಾಣಿ 8095531313 ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

Edited By : Nagesh Gaonkar
Kshetra Samachara

Kshetra Samachara

29/09/2020 11:53 am

Cinque Terre

40.89 K

Cinque Terre

7

ಸಂಬಂಧಿತ ಸುದ್ದಿ